Sunday, June 14, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು...
ಜಿಲ್ಲೆಶಿವಮೊಗ್ಗಸುದ್ದಿ

ತೀರ್ಥಹಳ್ಳಿ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌ -ಕಹಳೆ ನ್ಯೂಸ್

ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್  ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ...
ಜಿಲ್ಲೆಸುದ್ದಿಹಾಸನ

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ ಯತ್ನ : ಕೊಲೆ ಬೆದರಿಕೆಗೆ ಹೆದರಿ ಬೈಕ್‌ನಿಂದ ಜಿಗಿದ ಬಾಲಕಿ -ಕಹಳೆ ನ್ಯೂಸ್

ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ  ನಡೆದಿದೆ. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್‌ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಾಪಸ್‌ ಕರೆದುಕೊಂಡು ಬರುವಾಗ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿದ್ಯಾಭ್ಯಾಸದ ಜೊತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ....
ಜಿಲ್ಲೆಸುದ್ದಿ

ಮುಧೋಳದಲ್ಲಿ ದಿಢೀರ್ ಭೂ ಕುಸಿತ : ಗ್ರಾಮಸ್ಥರಲ್ಲಿ ಆತಂಕ -ಕಹಳೆ ನ್ಯೂಸ್

ಬಾಗಲಕೋಟೆ: ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂ ಕುಸಿತ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಸುಮಾರು 20 ಅಡಿ ಆಳ 10 ಅಡಿ ಅಗಲ ಭೂಮಿ ಕುಸಿದಿದೆ. ಭೂಮಿ ದಿಢೀರ್ ಬಾಯಿ ತೆರೆದಿರುವ ದೃಶ್ಯ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಭೂ ಕುಸಿತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಭೂ ವಿಜ್ಞಾನಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ : ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್ -ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ. ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸಲು ಯೋಚಿಸಿದ್ದ ಕಾಂಗ್ರೆಸ್ (Congress) ಹೈಕಮಾಂಡ್ ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು ಪ್ರಮುಖ ಸಮುದಾಯಗಳ ಪ್ರಾತಿನಿಧ್ಯವನ್ನು ಬ್ಯಾಲೆನ್ಸ್ ಮಾಡಲು ಕೊನೆಗೂ ‘ಡಿಸಿಎಂ’ ಸೂತ್ರಕ್ಕೆ...
ಜಿಲ್ಲೆಶಿವಮೊಗ್ಗಸುದ್ದಿ

ರೆಕ್ಟಲ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್‌ -ಕಹಳೆ ನ್ಯೂಸ್

ಶಿವಮೊಗ್ಗ: ರೆಕ್ಟಲ್‌ ಕ್ಯಾನ್ಸರ್‌ನಿಂದ  ಬಳಲುತ್ತಿದ್ದ ಅಭಿಮಾನಿಯ ಆರೋಗ್ಯವನ್ನು ಕೆಜಿಎಫ್‌ ಸ್ಟಾರ್‌ ಯಶ್‌ ವಿಚಾರಿಸಿದ್ದಾರೆ. ಶಿವಮೊಗ್ಗ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೀಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ, ಅಭಿಮಾನಿಗೆ ಯಶ್‌ ಧೈರ್ಯ ತುಂಬಿದ್ದಾರೆ....
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಯದುವೀರ್ ಸ್ಪಷ್ಟನೆ -ಕಹಳೆ ನ್ಯೂಸ್

ಮಡಿಕೇರಿ: ಕೊಡಗು  ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್ ಒಡೆಯರ್  ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಬಳಿಕ ಈ ಕುರಿತು ಯದುವೀರ್ ಸ್ಪಷ್ಟನೆ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ...
1 13 14 15 16 17 3,391
Page 15 of 3391