ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ಫಿಲೋ- ನೆಕ್ಸಾ 2026: ವಿಜ್ಞಾನ ಮತ್ತು ಪ್ರತಿಭೆಯ ಅನಾವರಣ – ಕಹಳೆ ನ್ಯೂಸ್
ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ- ನೆಕ್ಸಾ 2026 ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು....







