ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಚಿಕಿತ್ಸೆ ಫಲಿಸದೆ ಫೋಟೋಗ್ರಾಫರ್ ಗಣೇಶ್ ನಿಧನ..!!-ಕಹಳೆ ನ್ಯೂಸ್
ಮಂಗಳೂರು : ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ನಿವಾಸಿ ನೋಣಯ್ಯ ಗೌಡ ಅವರ ಪುತ್ರರಾದ ಗಣೇಶ್ ಗೌಡ ಅವರು ಕಾಯರ್ತಡ್ಕದಲ್ಲಿ ತಮ್ಮದೇ ಆದ ಗಣೇಶ್ ಸ್ಟುಡಿಯೋ ನಡೆಸುತ್ತಿದ್ದರು. ಗಣೇಶ್ ಗೌಡ ಅವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ...






