ನಾನು ಸತ್ರೆ ಒಂಟಿಯಾಗ್ತಾಳೆ : ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತುಹಿಸುಕಿ ಪತ್ನಿಯ ಕೊಲೆ – ಕಹಳೆ ನ್ಯೂಸ್
ಬೆಂಗಳೂರು: ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಇಂದು ಬೆಳಗ್ಗೆ ಟವಲ್ನಿಂದ ಕತ್ತು ಬಿಗಿದು ನಾಗೇಶ್ವರ್ ರಾವ್ (75)ಪತ್ನಿ ಸಂಧ್ಯಾ (65) ಅವರನ್ನು ಕೊಲೆ ಮಾಡಿದ್ದಾರೆ. ಮೂರು ವರ್ಷಗಳಿಂದ ಅಪಾರ್ಟ್ಮೆಂಟ್ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್ ರಾವ್ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು...





