Sunday, June 14, 2026

ಸುದ್ದಿ

ರಾಜ್ಯಸುದ್ದಿ

ಟ್ರಂಪ್‌ ಪುತ್ರಿ ಇವಾಂಕಾ ಹತ್ಯೆಗೆ ಸಂಚು ರೂಪಿಸಿದ್ದ ಐಆರ್‌ಜಿಸಿ : ಸ್ಫೋಟಕ ಮಾಹಿತಿ ಬಹಿರಂಗ -ಕಹಳೆ ನ್ಯೂಸ್

ವಾಷಿಂಗ್ಟನ್‌: ಇರಾಕಿನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ನಿಂದ ತರಬೇತಿ ಪಡೆದ ಗ್ರೂಪ್‌ವೊಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊದಲ ಪುತ್ರಿ ಇವಾಂಕಾ ಹತ್ಯೆಗೆ ಸಂಚು ನಡೆದಿದ್ದ ವಿಚಾರ ಬೆಳಕಿಗೆ ಬಂದಿದೆ. 32 ವರ್ಷದ ಮೊಹಮ್ಮದ್ ಬಕರ್ ಸಾದ್ ದಾವೂದ್ ಅಲ್-ಸಾದಿ ಶಂಕಿತ ಆರೋಪಿ. ಈತ 2020 ರ ಯುಎಸ್ ಡ್ರೋನ್ ದಾಳಿಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಿಂದಿನ ಅವಧಿಯಲ್ಲಿ ಇರಾನಿನ ಮಿಲಿಟರಿ ಕಮಾಂಡರ್ ಖಾಸಿಮ್ ಸೊಲೈಮಾನಿಯನ್ನು ಕೊಂದಿದ್ದಕ್ಕಾಗಿ...
ಬೆಂಗಳೂರುರಾಜ್ಯಸುದ್ದಿ

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ : ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ -ಕಹಳೆ ನ್ಯೂಸ್

ಬೆಂಗಳೂರು: ಮಾದಾವರ-ತುಮಕೂರು ಮೆಟ್ರೋ  ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr. G.Parameshwar) ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ. ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ...
ದೆಹಲಿಶಿಕ್ಷಣಸುದ್ದಿ

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ-ಕಹಳೆ ನ್ಯೂಸ್

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್‌ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...
ಸುದ್ದಿ

ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ-ಕಹಳೆ ನ್ಯೂಸ್

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ  ಈಜಲು ಹೋಗಿ 19 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಾದಾಮಿಯ ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಮನೋಜ್ ನೀರಿನಿಂದ ಮೇಲಕ್ಕೆ ಬರದೇ ಇದ್ದಾಗ ಸಾರ್ವಜನಿಕರು 112 ಪೊಲೀಸ್ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ದೆಹಲಿವಾಣಿಜ್ಯಸುದ್ದಿ

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ...
ಜಿಲ್ಲೆಸುದ್ದಿ

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ -ಕಹಳೆ ನ್ಯೂಸ್

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು,...
ದೆಹಲಿರಾಜ್ಯಸುದ್ದಿ

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ನವದೆಹಲಿ: ಇಂದು 19ನೇ ಆವೃತ್ತಿಯ ಉದ್ಯೋಗ ಮೇಳ ನಡೆಯಲಿದ್ದು, 51,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಈ ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ...
ಜಿಲ್ಲೆಸುದ್ದಿ

ಇಂದಿನಿಂದ 4 ದಿನ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾರತ ಪ್ರವಾಸ -ಕಹಳೆ ನ್ಯೂಸ್

ಕೋಲ್ಕತ್ತಾ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರತ (India) ಪ್ರವಾಸ ಮಾಡಲಿದ್ದು, ಮೊದಲ ಹಂತವಾಗಿ ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ (Sergio Gor) ಅವರು ಮಾರ್ಕೊ ರೂಬಿಯೊ ಅವರನ್ನು ಸ್ವಾಗತಿಸಿದರು. 2012ರಲ್ಲಿ ಹಿಲ್ಲರಿ ಕ್ಲಿಂಟನ್ ಕೊಲ್ಕತ್ತಾಗೆ ಭೇಟಿ ನೀಡಿದ್ದರು. ಇದಾಗಿ 14 ವರ್ಷಗಳ ನಂತರ ಅಮೆರಿಕದ ಪ್ರತಿನಿಧಿ ಮಾರ್ಕೊ ರೂಬಿಯೋ ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಕೊಲ್ಕತ್ತಾದ ಮಿಷನರೀಸ್...
1 27 28 29 30 31 3,392
Page 29 of 3392