ದುಬಾರೆ ದುರಂತ : ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್ -ಕಹಳೆ ನ್ಯೂಸ್
ಮಡಿಕೇರಿ: ದುಬಾರೆ ಆನೆ ಕ್ಯಾಂಪ್ನಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ...







