ಕಂಬಳಕ್ಕೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಕಾರ | ಸಂಪೂರ್ಣ ನ್ಯಾಯ ದೊರಕುವವರೆಗೂ ಹೋರಾಟ – ಅಶೋಕ್ ರೈ.
ನವದೆಹಲಿ: ಕರ್ನಾಟಕದ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆ ಕೋರಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಡೆ ನೀಡಲು ನಿರಾಕರಿಸಿದೆ.ಈ ಸಂಬಂಧ ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ನೀಡಿರುವ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನವೆಂಬರ್ 13 ಕ್ಕೆ ನಿಗದಿಪಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯ...






