ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ ಚಾಲನೆ | ಸಿದ್ದು ಸರ್ಕಾರ ಕಿತ್ತೊಗೆಯಿರಿ – ಶಾ
ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ...







