ಮಾರ್ಚ್ಗೆ ಎತ್ತಿನಹೊಳೆ ಲೋಕಾರ್ಪಣೆಯಾಗಲಿದೆ : ಸಿಎಂ
ಮಧುಗಿರಿ :ಬರುವ ಮಾರ್ಚ್ನಲ್ಲಿ ಎತ್ತಿನಹೊಳೆ ಯೋಜನೆ ಲೋಕಾರ್ಪಣೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ನೀಗುವ ಎತ್ತಿನಹೊಲೆ ಕಾಮಗಾರಿ ಪ್ರಗತಿಯಲ್ಲಿದೆ. ಬರುವ ಮಾರ್ಚ್ನಲ್ಲಿ ಯೋಜನೆ ಲೋಕಾರ್ಪಣೆಯಾಗಲಿದೆ ಎಂದರು. ಮಧುಗಿರಿಯಲ್ಲಿಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಗೆ 13 ಸಾವಿರ ಕೋಟಿ ರೂ. ಮೀಸಲಿರಿಸಿದ್ದೇವೆ. ಅದರಲ್ಲಿ ಈಗಾಗಲೇ 2,500 ಕೋಟಿ ರೂ. ಖರ್ಚಾಗಲಿದೆ ಎಂದವರು ಹೇಳಿದರು....







