ಹಾಸ್ಟೆಲ್ ಟೆರೇಸ್ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು -ಕಹಳೆ ನ್ಯೂಸ್
ಲಕ್ನೋ: ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ. ಅನು ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದಳು. ಬುಧವಾರ 9:30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಾಸ್ಟೆಲ್ ಕೆಲಸದಾಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡು ತಕ್ಷಣವೇ ಇತರೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದ...







