Monday, June 15, 2026

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೇ 28 ರಂದು ಅಮ್ಮ ಮಂಗಳೂರಿಗೆ ಆಗಮನ ; ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಮೇ.06: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ 2026″ದ ಪ್ರಯುಕ್ತ ಚಪ್ಪರ ಮುಹೂರ್ತ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ” ಮಾನವ ಮಹಾದೇವತ್ವಕ್ಕೆ ಏರುವ...
ಬೆಂಗಳೂರುರಾಜ್ಯಸುದ್ದಿ

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ಅಹಮದಾಬಾದ್‌ನಲ್ಲಿ  ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣೆ ಮುಗಿದಿದ್ದು, ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸ ಇದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಕುರ್ಚಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗೊಂದಲಗಳು ಬಗೆಹರಿಯಲೇಬೇಕು. ನಮ್ಮ ಉದ್ದೇಶ ಆಡಳಿತದ ಮೇಲೆ ಪರಿಣಾಮ ಬೀರಬಾರದು. ಅದಕ್ಕಾಗಿ ಗೊಂದಲ ಬಗೆಹರಿಯಲೇಬೇಕು. ಹೈಕಮಾಂಡ್ ಗೊಂದಲ ಬಗೆಹರಿಸೋ ವಿಶ್ವಾಸ ಇದೆ. ಬಗೆಹರಿಸಲು ಆಗದೇ ಇರೋ ಗೊಂದಲ ಇದಲ್ಲ. ಚುನಾವಣೆಯಲ್ಲಿ ಹೈಕಮಾಂಡ್ ನಾಯಕರು ಬ್ಯುಸಿ ಇದ್ದರು. ಈಗ ಚುನಾವಣೆ...
ಜಿಲ್ಲೆಸುದ್ದಿಹಾಸನ

ಇಂದು ಲೋಕಾರ್ಪಣೆಗೊಳ್ಳಲಿದೆ ಅಂಬಾರಿ ಆನೆ ಅರ್ಜುನನ ಪ್ರತಿಮೆ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಸಕಲೇಶಪುರ  ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್‌ಮಂಜು ಭಾಗಿಯಾಗಲಿದ್ದಾರೆ. 2023ರ ಡಿಸೆಂಬರ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ಹಸ್ತಾಂತರ ಹಾಗೂ ಜನಜಾಗೃತಿ ವೇದಿಕೆ ಸದಸ್ಯರಿಂದ ಮನೆಗೆ ಉಚಿತವಾಗಿ ವಿದ್ಯುತ್ ವೈರಿಂಗ್ ವ್ಯವಸ್ಥೆಯ ಭರವಸೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗಣೇಶಕೋಡಿ ರಾಜೇಶ್ವರಿ ರವರಿಗೆ 10 ಸಾವಿರ ಮಂಜೂರಾಗಿದ್ದು ಇದನ್ನು ಮೇ 5 ಮಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ತಾಲೂಕು ಜನಜಾಗೃತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಪಘಾತಕ್ಕೆ ಕಾರಣವಾಗಿರುವ ಅಪೂರ್ಣ ಚತುಷ್ಪಥ ರಸ್ತೆ ಕಾಮಗಾರಿ, ದುರಸ್ತಿಗೆ ಒತ್ತಾಯಿಸಿ ರಸ್ತೆ ತಡೆ – ಪ್ರತಿಭಟನೆ -ಕಹಳೆ ನ್ಯೂಸ್

ಸುರತ್ಕಲ್ : ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ನಾಗರಿಕರ ಸುಧೀರ್ಘ ಹೋರಾಟದ ಬಳಿಕ...
ಜಿಲ್ಲೆಸುದ್ದಿಹಾಸನ

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್...
ಸುದ್ದಿ

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ : ಪೈಲಟ್ ಸೇರಿ ಮೂವರು ಸಾವು – ಇಬ್ಬರ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ  ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ (Plane Crash) ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ...
1 47 48 49 50 51 3,392
Page 49 of 3392