ಇಂದು ಲೋಕಾರ್ಪಣೆಗೊಳ್ಳಲಿದೆ ಅಂಬಾರಿ ಆನೆ ಅರ್ಜುನನ ಪ್ರತಿಮೆ -ಕಹಳೆ ನ್ಯೂಸ್
ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್‌ಮಂಜು ಭಾಗಿಯಾಗಲಿದ್ದಾರೆ. 2023ರ ಡಿಸೆಂಬರ್...







