ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ – ಕಹಳೆ ನ್ಯೂಸ್
ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭವಾಗಿದೆ. ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿದ್ದಾರೆ. ತಿಂಗಳ ಹಿಂದೆ ನಗರದ ಮೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭ ಮಾಡಲಾಗಿತ್ತು. ನೋ ಪಾರ್ಕಿಂಗ್, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಪ್ರತಿದಿನ 60 ರಿಂದ 70 ವಾಹನಗಳ ಟೋಯಿಂಗ್ ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿ, ದಂಡ ವಿಧಿಸಲಾಗಿದೆ....







