Saturday, June 13, 2026

ಸುದ್ದಿ

ಸುದ್ದಿ

ಮಂಗಳೂರಿನ ಹೆಸರಾಂತ ಉದ್ಯಮಿಗೆ ಬ್ಲಾಕ್ ಮೇಲ್..! ಹುಡುಗ ಆತ್ಮಹತ್ಯೆ ಮಾಡಿದ್ದಾಗಿ ಸುಳ್ಳುಕತೆ ಸೃಷ್ಟಿಸಿ ಕೋಟಿ ಕೋಟಿ ಲೂಟಿಗೈದ ಯುವ ಕಾಂಗ್ರೆಸ್ ಮುಖಂಡ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸ್ನೇಹಿತ ಜಿತೇಶ್ ಬಂಧನಕ್ಕೀಡಾದವರು. 2024ರಲ್ಲೇ ಉದ್ಯಮಿಗೆ ಹನಿಟ್ರಾಪ್ ಖೆಡ್ಡಾ ತೋಡಿದ್ದ ಆರೋಪಿಗಳು 2026ರ ವರೆಗೂ ಆತ್ಮಹತ್ಯೆ ನಾಟಕವಾಡಿ ಬರೋಬ್ಬರಿ 2 ಕೋಟಿ...
ಸುದ್ದಿ

ಗೂನಡ್ಕದಲ್ಲಿ ತಡರಾತ್ರಿ ಕಾಡಾನೆಗಳ ದಾಳಿ; ಪಟಾಕಿಗೂ ಕ್ಯಾರೇ ಅನ್ನದೆ ಕೃಷಿ ತೋಟಕ್ಕೆ ನುಗ್ಗಿದ ಗಜಪಡೆ..! – ಕಹಳೆ ನ್ಯೂಸ್

ಮಂಗಳೂರು : ಸುಳ್ಯ : ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ನಿನ್ನೆ ತಡರಾತ್ರಿ 8 ರಿಂದ 10 ಕಾಡಾನೆಗಳ ಬೃಹತ್ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಭಾರಿ ಪ್ರಮಾಣದ ಬೆಳೆ ಹಾನಿ ಮಾಡಿದೆ. ಆನೆಗಳು ನುಗ್ಗದಂತೆ ತಡೆಯಲು ರೈತರು ನಡೆಸಿದ ಗಂಭೀರ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ನಿನ್ನೆ ತಡರಾತ್ರಿ ಅರಣ್ಯ ಗಡಿಯಿಂದ ಹೊರಬಂದ ಕಾಡಾನೆಗಳ ಹಿಂಡು...
ಸುದ್ದಿ

ಸೀಮಂತ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ – ಕಹಳೆ ನ್ಯೂಸ್

ಬಂಟ್ವಾಳ : ಸೀಮಂತ ಕಾರ್ಯಕ್ರಮ ಮುಗಿಸಿ ಸಂತೋಷದಿಂದ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಹೆದ್ದಾರಿಯಲ್ಲೇ ಮೃತ್ಯುವಾಗಿ ಕಾಡಿದೆ. ಮಿನಿ ಬಸ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ಸಮೀಪದ ಪುದು ಗ್ರಾಮದಲ್ಲಿ ಸಂಭವಿಸಿದೆ. ಮಂಗಳೂರು ಮೂಲದ ವಿಕಾಸ್ ಎಂಬ ಯುವಕನೇ ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ವಿಕಾಸ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ...
ಸುದ್ದಿ

ಯುವವಾಹಿನಿ(ರಿ) ಬಂಟ್ವಾಳ ಘಟಕ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂ.7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್,...
ಸುದ್ದಿ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೆಮ್ಮಾಯಿ ನಿವಾಸಿ ರಕ್ಷಾ ರೈ ಎಂಬವರಿಗೆ ವಜ್ರತೇಜಸ್ ತಂಡದಿಂದ ಸಹಾಯಧನ ವಿತರಣೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ 'ವಜ್ರತೇಜಸ್' ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೆಮ್ಮಾಯಿ ನಿವಾಸಿ ರಕ್ಷಾ ರೈ ಎಂಬವರಿಗೆ ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಅವರ ಮುಂದಿನ ಚಿಕಿತ್ಸಾ ವೆಚ್ಚಕ್ಕೆ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷರಾದ ಮುರಳೀಕೃಷ್ಣ ಹಸಂತಡ್ಕ, ವಿ. ಹಿಂ. ಪ ಜಿಲ್ಲಾ ಪ್ರಚಾರ...
ಸುದ್ದಿ

ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ- ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ  ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಕೊರತೆಯಿಂದಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. 2016 ರಲ್ಲಿ ಯೋಜನೆ ಆರಂಭವಾದಾಗ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿತ್ತು. ಕಳೆದ ವರ್ಷ ಇದನ್ನು 9 ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ಮತ್ತೆ 4 ಕ್ಕೆ...
ಸುದ್ದಿ

ತುಂಗಭದ್ರಾ ಜಲಾಶಯಕ್ಕೆ ಜೀವಕಳೆ : ಕಲ್ಯಾಣ ಕರ್ನಾಟಕ ರೈತರಲ್ಲಿ ಹರ್ಷ- ಕಹಳೆ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಲಕ್ಷಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಂಗಾರು ಮಳೆಯ  ಆರಂಭದಲ್ಲೇ ಹೊಸ ಕಳೆ ಬಂದಿದೆ. ತೀವ್ರ ಬೇಸಿಗೆಯಿಂದಾಗಿ ಒಣಗಿ ‘ಡೆಡ್ ಸ್ಟೋರೇಜ್’ ತಲುಪಿದ್ದ ಜಲಾಶಯಕ್ಕೆ ಈಗ ಜಲಾನಯನ ಪ್ರದೇಶಗಳಿಂದ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 101 ಟಿಎಂಸಿ ಆಗಿದ್ದು ಸದ್ಯ ಜಲಾಶಯದಲ್ಲಿ 10 ಟಿಎಂಸಿ  ನೀರು ಸಂಗ್ರಹವಾಗಿದೆ. ಮುಂಗಾರು ಮಳೆಯ ಅಬ್ಬರ...
ಬೆಂಗಳೂರುರಾಜ್ಯಸುದ್ದಿ

ಮುಂಗಾರು ಅಬ್ಬರ: ರಾಜ್ಯದಲ್ಲಿ ಜೂ.13ರವರೆಗೆ ಭಾರೀ ಮಳೆ ಮುನ್ಸೂಚನೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆಯಿದ್ದು, ಜೂನ್ 13ರವರೆಗೆ ಹವಾಮಾನ ಇಲಾಖೆ  ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 13ರವರೆಗೆ ಬಿರುಗಾಳಿ ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ....
1 4 5 6 7 8 3,391
Page 6 of 3391