ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ – ಕಹಳೆ ನ್ಯೂಸ್
ಜೈಪುರ: ನಾಳೆ (ಏ.21) ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಬೇಕಿದ್ದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಸಿಎಂ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ನಾಳೆಯ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಸದ್ಯ ಅಗ್ನಿ ಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಸದ್ಯ ಘಟಕಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ನಾಳೆ ಮೋದಿ ಉದ್ಘಾಟನಾ...







