ಪಿಯುಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿಗೆ ಅವಕಾಶ ನೀಡದ ಶಿಕ್ಷಕಿ ಅಮಾನತು – ಕಹಳೆ ನ್ಯೂಸ್
ಹಾವೇರಿ: ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಶನಿವಾರ (ಫೆ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಮಾಧ್ಯಮ ವರದಿ ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ....







