ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್ – ಕಹಳೆ ನ್ಯೂಸ್
ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ. ಜ.17ರಂದು ಹಾಸನದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ...







