Thursday, June 18, 2026

ಸುದ್ದಿ

ಸುದ್ದಿ

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ – ಕಹಳೆ ನ್ಯೂಸ್

ಉಡುಪಿ: ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ (Fishing) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ (Diesel) ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು ಈಗ ಸಂಕಷ್ಟದ ಅಂಚಿನಲ್ಲಿದ್ದಾರೆ. ಕರಾವಳಿಯ ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಡೀಸೆಲ್ ಪೂರೈಕೆಯನ್ನು ಅವಲಂಬಿಸಿದೆ. ಉಡುಪಿ-ಮಂಗಳೂರು ಭಾಗದಲ್ಲಿ ಪ್ರತಿದಿನ 10 ರಿಂದ 12 ಲಕ್ಷ ಲೀಟರ್ ಡೀಸೆಲ್...
ಸುದ್ದಿ

ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ; ಕೃತ್ಯಕ್ಕೆ ಬಳಸಲಾಗಿದ್ದ ಕಾರು ಪತ್ತೆ – ಕಹಳೆ ನ್ಯೂಸ್

ಮಂಗಳೂರು: ತೊಕ್ಕೊಟ್ಟು ಫೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ 'ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಪೊಲೀಸರಿಗೆ ಬಂಟ್ವಾಳದ ಬುಡೋಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಕಾರು ಇರುವ ಬಗ್ಗೆ...
ಸುದ್ದಿ

ನರಿಕೊಂಬು ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳಿಗೆ ತರಬೇತಿ ಕಾರ್ಯಗಾರ – ಕಹಳೆ ನ್ಯೂಸ್

ಬಂಟ್ವಾಳ : ಬಾಳ್ತಿಲ ಹಾಗೂ ಬಂಟ್ವಾಳ ನಗರ ಕ್ಲಸ್ಟರ್ನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರ ಮಾರ್ಚ್ 27ರ ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನರಿಕೊಂಬು ಇಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್ ವಹಿಸಿದ್ದರು. ಕಾರ್ಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೇಮಿ ಫೆರ್ನಾಂಡಿಸ್ ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಎಸ್ ಡಿ ಎಂ ಸಿ ಯ...
ಸುದ್ದಿ

ಪ್ರಭು ಚರುಂಬುರಿ ಇನ್ಮುಂದೆ ಪ್ರಭು’ಸ್‌ ಚರುಂಬುರಿ : ಮಾ. 28ರಂದು ‘ಪ್ರಭು’ಸ್ ಚರುಂಬುರಿ ಅಂಡ್ ಚಾಟ್ಸ್’ ಆಗಿ ಮರು ಲೋಕಾರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನಗರದ ಪ್ರಸಿದ್ಧ ಪ್ರಭು ಚರುಂಬುರಿ ಇದೀಗ ಹೊಸತನದ ಸ್ಪರ್ಶದೊಂದಿಗೆ ‘ಪ್ರಭು’ಸ್ ಚರುಂಬುರಿ ಅಂಡ್ ಚಾಟ್ಸ್’ ಎಂಬ ಬ್ರಾಂಡ್ ನೇಮ್ ಜತೆಗೆ ಮಾರ್ಚ್ 28ರಂದು ಸಮಾಜಕ್ಕೆ ಸಮರ್ಪಣೆಗೊಳ್ಳಲಿದೆ ಕಳೆದ ಎರಡೂವರೆ ದಶಕಗಳಿಂದ ಪ್ರಭು ಚರುಂಬುರಿ ಪುತ್ತೂರಿನಾದ್ಯಂತ ಹೆಸರುವಾಸಿಯಾಗಿ ದಿನೇ ದಿನೇ ಹೆಚ್ಚಿನ ಗ್ರಾಹಕರನ್ನು ತನ್ನೆಡೆಗೆ ಸೆಳೆದುಕೊಳ್ಳುತ್ತಲೇ ಬಂದಿದೆ. ಆರಂಭದಲ್ಲಿ ಪುತ್ತೂರಿನ ಶ್ರೀಧರ ಭಟ್ ವಾಣಿಜ್ಯ ಕೇಂದ್ರದ ಎದುರು ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಭು ಚರುಂಬುರಿ ತದನಂತರ ಕಳೆದ ಆರು ವರ್ಷಗಳಿಂದ ಕೊಂಬೆಟ್ಟಿನ...
ಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ 2026 – ಟೈಟಲ್ ಸಾಂಗ್ ಬಿಡುಗಡೆ – ಕಹಳೆ ನ್ಯೂಸ್

ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ **“ಡೆನ್ನಾನ ಡೆನ್ನನ 2026”**ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ,...
ಸುದ್ದಿ

ಅಯೋಧ್ಯೆಯಿಂದ ಹನುಮಗಿರಿಗೆ ಹೊರಟಿದೆ ಜ್ಯೋತಿ ಹಾಗೂ ಮೂಲ ಮೃತ್ತಿಕೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏ.9ರಿಂದ 12ರ ತನಕ ನಡೆಯಲಿದ್ದು, ಅಯೋಧ್ಯೆಯಿಂದ ಜ್ಯೋತಿ ಹಾಗೂ ಮೂಲ ಮೃತ್ತಿಕೆಯನ್ನು ತರಲು ಹನುಮಗಿರಿಯಿಂದ ರಾಮಹನುಮ ಜ್ಯೋತಿ ರಥಯಾತ್ರೆ ರಾಮ ಜನ್ಮಭೂಮಿ ಅಯೋಧ್ಯೆಗೆ ಹೊರಟಿದ್ದು, ಅಯೋಧ್ಯೆ ತಲುಪಿರುವ ರಥಯಾತ್ರೆಗೆ ಸಕಲ ಪೂಜಾ ಕೈಂಕರ್ಯ ನೆರವೇರಿದೆ. ರಥಯಾತ್ರೆ ಅಂಜನಾದ್ರಿ ಮೂಲಕ ಹನುಮಗಿರಿಗೆ ಆಗಮಿಸುತ್ತಿದೆ.ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರ ದೇವಾಲಯದ ನಿರ್ಮಾಣದ ಉಸ್ತುವಾರಿ ಗೋಪಾಲ್ ಜಿ...
ಸುದ್ದಿ

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ – ಕಹಳೆ ನ್ಯೂಸ್

ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ. ಸೂರ್ಯ ರಶ್ಮಿಯು ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂದಿದೆ. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ಬಾಲ ರಾಮನ ಮೂರ್ತಿಯ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕ ರೂಪಿಸಿತು. ಈ ತಿಲಕವು ಮೂರ್ತಿಯ ಮೇಲೆ ಸುಮಾರು 3 ರಿಂದ 4...
ಸುದ್ದಿ

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್‌ಗಳನ್ನ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಹಿನ್ನೆಲೆ 247 ಸಿಲಿಂಡರ್‌ಗಳನ್ನ ಜಪ್ತಿ ಮಾಡಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು ಮಾಹಿತಿ ನೀಡಿದ್ದಾರೆ. ಬಾಗೇಪಲ್ಲಿಯಲ್ಲಿ 13, ಚಿಕ್ಕಬಳ್ಳಾಪುರ 71, ಚಿಂತಾಮಣಿ 26, ಗೌರಿಬಿದನೂರು 36, ಗುಡಿಬಂಡೆ 68, ಶಿಡ್ಲಘಟ್ಟ 31, ಚೇಳೂರಿನಲ್ಲಿ 2 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. 214 ಗೃಹಬಳಕೆ ಸಿಲಿಂಡರ್‌ಗಳು ಹಾಗೂ 33 ವಾಣಿಜ್ಯ ಸಿಲಿಂಡರ್‌ಗಳನ್ನ ಜಪ್ತಿ ಮಾಡಲಾಗಿದೆ. ಇನ್ನೂ ಗೃಹಬಳಕೆ ಸಿಲಿಂಡರ್‌ಗಳನ್ನ ವಾಣಿಜ್ಯ...
1 86 87 88 89 90 3,395
Page 88 of 3395