ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಬೆಂಕಿ ಇಟ್ಟ ಕಿಡಿಕೇಡಿಗಳು-ಕಹಳೆ ನ್ಯೂಸ್
ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಕೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇದರಿಂದಾಗಿ ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ್ದು, ಶುಕ್ರವಾರ ರಾತ್ರಿ 9.30 ರ ಸಮಯದಲ್ಲಿ ಬೆಟ್ಟಕ್ಕೆ ಬೆಂಕಿ ಇಟ್ಟಿರುವುದು ತಿಳಿದು ಬಂದಿದೆ. ಅಲ್ಲದೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದ ಕಾರಣ ಮತ್ತು ಬೆಟ್ಟದಲ್ಲಿನ ಹುಲ್ಲು ಒಣಗಿರುವ ಕಾರಣ ತ್ವರಿತಗತಿಯಲ್ಲಿ ಬೆಂಕಿ...







