ಅಮಿತ್ ಶಾ – ರೈತ ನಾಯಕರ ಸಭೆ ವಿಫಲ : ಇಂದು ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆ ರದ್ದು – ಕಹಳೆ ನ್ಯೂಸ್
ನವದೆಹಲಿ: ಮಂಗಳವಾರ ರೈತರು ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ ನದೆಸಿದ್ದು, ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ರೈತ ಮುಖಂಡರ ನಡುವೆ ನಡೆದ ಸಭೆ ನಡೆದಿದ್ದು, ಅದು ವಿಫಲವಾಗಿದೆ ಎಂದು ತಿಳಿದು ಬಂದಿದೆ. ಅಮಿತ್ ಶಾ ಮನವಿ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ಮತ್ತು ರೈತರು ಪಟ್ಟು ಸಡಿಲಿಸದೆ ತಮ್ಮ ನಿಲುವುಗಳಿಗೆ ಭದ್ರವಾಗಿ ಅಂಟಿಕೊಂಡಿರುವುದರಿಂದ ಮಾತುಕತೆ ಫಲಪ್ರದವಾಗಿಲ್ಲ....






