ಇಂದಿನಿಂದ ಪದವಿ ಕಾಲೇಜುಗಳು ಆರಂಭ : ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಸಚಿವ ಸುಧಾಕರ್ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ 8 ತಿಂಗಳ ಬಳಿಕ ಪದವಿ ಕಾಲೇಜುಗಳು ಇಂದಿನಿಂದ ಆರಂಭವಾಗುತ್ತಿದ್ದು, ಸಚಿವ ಡಾ.ಕೆ. ಸುಧಾಕರ್ ಅವರು ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಮನವಿ ಮಾಡುತ್ತೇನೆ. ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ....







