ಪ್ರತಿಯೊಬ್ಬರಿಗೂ ನಿವೇಶನ, ಮನೆ ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ-ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್
ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ನಮ್ಮ ಗುರಿಯಾಗಿದೆ. ಅಲ್ಲದೇ ಸರ್ಕಾರದಿಂದ ನಿವೇಶನ ನೀಡಿದ ಪ್ರತಿಯೊಬ್ಬರಿಗೂ ಮನೆ ಕಟ್ಟಿಕೊಡಬೇಕು ಎಂಬ ಆಪೇಕ್ಷೆ ಇದೆ. ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಯಾವುದೇ ಒಬ್ಬ ವ್ಯಕ್ತಿಗೂ ರಾಜ್ಯದಲ್ಲಿ ಸೂರಿನ ಕೊರತೆ ಯಾಗಬಾರದು. ಪ್ರತಿಯೊಬ್ಬರಿಗೂ...







