ವಿದ್ಯಾಗಮ ತಾತ್ಕಾಲಿಕ ಸ್ಥಗಿತ! : ಶಿಕ್ಷಣ ಸಚಿವ ಸುರೇಶ್ ಕುಮಾರ್-ಕಹಳೆ ನ್ಯೂಸ್
ಬೆಂಗಳೂರು:ಕೊರೊನಾ ಕಾರಣದಿಂದಾಗಿ ಮಕ್ಕಳು ಕಲಿಕೆಯಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ರೂಪಿಸಿದ್ದ 'ವಿದ್ಯಾಗಮ' ಯೋಜನೆ ಮೇಲೂ ಕೋವಿಡ್-19 ಕರಿಛಾಯೆ ಆವರಿಸಿದೆ. ಈ ಯೋಜನೆಯಿಂದಾಗಿ ಶಿಕ್ಷಕರಲ್ಲಿ ಕರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ದಟ್ಟವಾಗಿ ಕೇಳಿಬಂದಿತ್ತು. ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ...







