ಟೋಕಿಯೋ ಒಲಂಪಿಕ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ ಮಹಿಳಾ ಹಾಕಿ ತಂಡದ ಕೋಚ್ ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಿದ ಸಿಎಂ- ಕಹಳೆ ನ್ಯೂಸ್
ಟೋಕಿಯೋ-2020-21 ಓಲಂಪಿಕ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಬಿಲ್ಲವ ಸುರೇಶ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿ, ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ಹೆಮ್ಮೆಯ ಸಂಗತಿ ಆಗಿದೆ. ಅಂಕಿತ ಅವರು ಮಡಿಕೇರಿ ಮೂಲದವರಾಗಿದ್ದು,...







