ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-ಕಹಳೆ ನ್ಯೂಸ್
ಫೆಬ್ರವರಿ 27 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ ವಿ ರಾಮನ್ ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”ಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳಿಂದ ವೈಜ್ಞಾನಿಕ ಮಹತ್ವವಿರುವ ತುಳಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಲಾಯಿತು. "ವಿಶೇಷವಾದ ಜ್ಞಾನ ಹೊಂದಿರುವುದೇ ವಿಜ್ಞಾನ" ಎಂದು ಶ್ರೀರಾಮ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಸುಬ್ರಹ್ಮಣ್ಯ ಭಟ್ ವಿಜ್ಞಾನದ ಬಗ್ಗೆ...







