ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಎಪಿಪಿ-ಕಹಳೆ ನ್ಯೂಸ್
ಶಿರಸಿ: ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (APP) ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಫೆ. 28ರ ಶುಕ್ರವಾರ ನಡೆದಿದೆ. ಜೆ.ಎಂ.ಎಫ್.ಸಿ ನ್ಯಾಯಾಲಯದ ಎಪಿಪಿ ಪ್ರಕಾಶ ಲಮಾಣಿ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಬಗ್ಗೆ ಲೋಕಾಯುಕ್ತರಿಂದ ವಿಚಾರಣೆ ತೀವ್ರಗೊಂಡಿದೆ. ಕಳ್ಳತನದಲ್ಲಿ ವಶಪಡಿಸಿಕೊಂಡು ನ್ಯಾಯಾಲಯದಲ್ಲಿರುವ ಮುದ್ದೆಮಾಲು ಪಡೆಯಲು ಈ ಲಂಚದ ಬೇಡಿಕೆ...







