Sunday, September 6, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೌಟುಂಬಿಕ ಕಲಹ :ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಾಂಬಾರ್  ಮಾಡಿಲ್ಲ ಅಂತ ಅಪ್ಪ  ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಯುವತಿಗೆ ಅಪ್ಪ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದಾರೆ. ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ :ಪ್ರಯಾಣಿಕರು ಜಸ್ಟ್‌ ಮಿಸ್‌ -ಕಹಳೆ ನ್ಯೂಸ್

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು  ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಮರ ಬಿದ್ದಿದೆ. ಮರ ಬೀಳುವ ದೃಶ್ಯ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.   ಮರ ಬೀಳುತ್ತಿದ್ದಂತೆ ಚಾಲಕ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ....
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿ (Ambedkar Jayanti) ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. 7 ಜನರಿಗೆ ಗಾಯವಾಗಿದೆ. 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದೆ. 11 ವರ್ಷದ ನಿಶ್ಚಿತ್-ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಹಾಸನದ ಮೆಡಿಕಲ್‌ ಕಾಲೇಜಿಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೇರಳದಿಂದ  ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ  ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ  ಭಾಗದಲ್ಲಿ ನಡೆದಿದೆ. ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ....
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ : 8 ಮಂದಿಗೆ ಗಾಯ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ : ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ -ಕಹಳೆ ನ್ಯೂಸ್

ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಪರಿಣಾಮ ಬೀರಿದೆ. ಗ್ಯಾಸ್ ಇಲ್ಲದೇ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಿಬ್ಬಂದಿ ಅಡುಗೆ ಮಾಡಲು ಪರದಾಡಿದ್ದಾರೆ. ಸಿಲಿಂಡರ್‌ ಸರಬರಾಜಾಗದೇ ಇದ್ದಿದ್ದರಿಂದ ಶಾಲೆಯ ಸಿಬ್ಬಂದಿ ಸೌದೆ ಬಳಸಿ ಬಯಲಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಲೆಯ ಸಿಬ್ಬಂದಿ, ಐದು ದಿನಗಳಿಂದ ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ ಮಾಡುತ್ತಿದ್ದೇವೆ....
ಚಿಕ್ಕಮಂಗಳೂರುಜಿಲ್ಲೆಸುದ್ದಿ

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ : ಚಾಲಕ, ಕ್ಲೀನರ್ ಪವಾಡಸದೃಶ ಪಾರು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟೀ ಎಸ್ಟೇಟಿನ ಲೈನ್ ಮನೆಗಳ ಬಳಿ ಪ್ರಪಾತಕ್ಕೆ ಉರುಳಿದೆ.‌ ಅಪಘಾತದಲ್ಲಿ ಲಾರಿ ಚಾಲಕ ಪಾರಾಗಿದ್ದು, ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು...
1 2 3 4 9
Page 2 of 9