Recent Posts

Monday, June 8, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಸುದ್ದಿ

ಧಾರಾಕಾರ ಮಳೆ; ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಗೆ ರೈಲ್ವೆ ಹಳಿಗೆ ಹಾಕಿದ್ದ ಜಲ್ಲಿ ಕಲ್ಲು ಕೊಚ್ಚಿ ಹೋದ ಘಟನೆ ತಾಲೂಕಿನ ಕಣಿವೆ ಗ್ರಾಮದಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೇ ಸಿಬ್ಬಂದಿ ತಕ್ಷಣ...
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೋ ಹಂತಕರನ್ನು ನಾವೇ ಹದ್ದುಬಸ್ತಿನಲ್ಲಿ ಇಡಬೇಕಾಗುತ್ತದೆ: ಸಿ.ಟಿ.ರವಿ ಎಚ್ಚರಿಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: 'ಗೋಹತ್ಯೆ ನಿಷೇಧ ಜಾರಿಯಲ್ಲಿದ್ದರೂ ಗೋಹತ್ಯೆ ನಡೆಯುತ್ತಿದೆ. ಪೊಲೀಸರು ಗೋಹಂತಕರನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸವನ್ನು ಮಾಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ನಾವೇ ಈ ಕೆಲಸ ಮಾಡಬೇಕಾಗುತ್ತದೆ' ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಎಚ್ಚರಿಸಿದರು. ಹಿಂದೂ ಹಿತರಕ್ಷಣಾ ವೇದಿಕೆಯಿಂದ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಗರದಲ್ಲಿ ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು. ಗೋಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಪೊಲೀಸ್ ಇಲಾಖೆ ತನ್ನ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಾನು ಹಿಂದೂ ಎಂದು ಹಿಂದೂ ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ಅನ್ಯಕೋಮಿನ ವ್ಯಕ್ತಿ ಶೃಂಗೇರಿ ಪೊಲೀಸರು, ವಶಕ್ಕೆ -ಕಹಳೆ ನ್ಯೂಸ್

ಚಿಕ್ಕಮಗಳೂರು : ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಅನ್ಯಕೋಮಿನ ಯುವಕ ಹಿಂದು ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ಸಮದ್ (42) ಬಂಧಿತ ಆರೋಪಿ. ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಸಮದ್,...
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ನೀವು ನನ್ನ ಮೇಲೆ 100 ‘FIR’ ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ : MLC ಸಿಟಿ ರವಿ ಹೇಳಿಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದರಿಂದ ನಿನ್ನೆ ಸಿಟಿ ರವಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಎಂಎಲ್ಸಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ 14ನೇ ವಯಸ್ಸಿನಲ್ಲಿ ಮೊದಲ ಬಾರಿ ಆಗಿತ್ತು. ನಮ್ಮ ಸಹನೆಗೂ ಒಂದು ಮಿತಿ ಇದೆ. ನೀವು ನನ್ನ ಮೇಲೆ 100 'FIR' ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ ಎಂದು ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಲ್ಲಿ ಮಾತನಾಡಿದ...
ಅಂಕಣಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಳಸದಲ್ಲಿ ಧಾರಾಕಾರ ಮಳೆ ; ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಳಸ  ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ ನೀರು ನುಗ್ಗಿದ್ದರಿಂದ ಕಾರ್ಮಿಕರು ಕಂಗಾಲಾಗಿದ್ದಾರೆ. ಕಟಾವು ಮಾಡಿದ್ದ ಟೀ ಎಲೆಗಳನ್ನು ಕಾಪಾಡಿಕೊಳ್ಳಲು ಪರದಾಡಿದ್ದಾರೆ. ನಿರಂತರ ಮಳೆಯಿಂದ ಮಲೆನಾಡಿಗರ ಜನಜೀವನ ಹೈರಾಣಾಗಿದೆ. ನಿರಂತರ ಸುರಿಯುತ್ತಿರೋ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ತೋಟದಲ್ಲಿ ಅರ್ಧಕರ್ಧ ಬೆಳೆ ನಾಶವಾಗಿದೆ....
ಕ್ರೈಮ್ಚಿಕ್ಕಮಂಗಳೂರುಸುದ್ದಿ

ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯ ಕೊಲೆ ; ಕಿಲಾಡಿ ಸೊಸೆ, ಪ್ರಿಯಕರ ಅರೆಸ್ಟ್-ಕಹಳೆ ನ್ಯೂಸ್

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ,...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಿಕ್ಕಮಗಳೂರು-ತಿರುಪತಿ ರೈಲಿಗೆ ‘ದತ್ತಪೀಠ ಎಕ್ಸ್’ಪ್ರೆಸ್’ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳ ಪಟ್ಟು – ಕಹಳೆ ನ್ಯೂಸ್

ಚಿಕ್ಕಮಗಳೂರು : ಜುಲೈ 17 ರಿಂದ ಆರಂಭವಾಗಲಿರುವ ಚಿಕ್ಕಮಗಳೂರು-ತಿರುಪತಿ ಎಕ್ಸ್ಪ್ರೆಸ್ ರೈಲಿಗೆ ದತ್ತಪೀಠ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದೆ. ಚಿಕ್ಕಮಗಳೂರಿನಿಂದ ತಿರುಪತಿಗೆ ಸಂಚರಿಸುವ ಎಕ್ಸ್ಪ್ರೆಸ್ ರೈಲಿಗೆ ನಿನ್ನೆ ಸಚಿವ ವಿ. ಸೋಮಣ್ಣ ಸಾಂಕೇತಿಕವಾಗಿ ಚಾಲನೆ ನೀಡಿದ್ದರು. ಇದೀಗ ಈ ರೈಲಿಗೆ ದತ್ತಪೀಠ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದೆ. ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್ ದತ್ತಪೀಠ ಎಕ್ಸ್ಪ್ರೆಸ್” ಚಿಕ್ಕಮಗಳೂರು-ತಿರುಪತಿ ಎಕ್ಸ್ಪ್ರೆಸ್ ರೈಲಿಗೆ ದತ್ತಪೀಠ...
ಚಿಕ್ಕಮಂಗಳೂರುಸುದ್ದಿ

ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ನವಿಲು ಸಾ*ವು. ಬಸ್ಸಿನ ಗಾಜು ಪೀಸ್ ಪೀಸ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ಶನಿವಾರ (ಜು.12) ಸಂಭವಿಸಿದೆ. ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸರಕಾರಿ ಬಸ್ಸಿಗೆ ನವಿಲು ಏಕಾಏಕಿ ಅಡ್ಡ ಬಂದಿದೆ ಕೂಡಲೇ ಚಾಲಕ ಎಚ್ಚೆತ್ತು ಬ್ರೇಕ್ ಹಾಕಿದ್ದಾರೆ ಆದರೆ ನವಿಲು ಬಸ್ಸಿನ ಎದುರಿನ ಗಾಜಿಗೆ ಬಡಿದು ಸಾವನ್ನಪ್ಪಿದೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದ್ದು, ಸವಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ...
1 2 3 4 5 6 8
Page 4 of 8