ಬಾಣಂತಿ, ಮಗು ಸಾವು : ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್
ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ...







