ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್ ಬುಕ್, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು -ಕಹಳೆ ನ್ಯೂಸ್
ಬೆಳಗಾವಿ: ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ...







