ಬೋರ್‌ವೆಲ್ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್
ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024...






