ಪೋನ್ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವು –ಕಹಳೆ ನ್ಯೂಸ್
ಮಂಡ್ಯ: ಪೋನ್ನಲ್ಲಿ ಮಾತನಾಡುತ್ತಾ ಇದ್ದ ವೇಳೆ ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯದ ಹರಳಹಳ್ಳಿ ಸರ್ಕಲ್ ಬಳಿ ನಡೆದಿದೆ. ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಧು(35) ಸಿಡಿಲಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಮಧು ತನ್ನ ಪತ್ನಿಯನ್ನ ತವರಿಗೆ ಬಿಟ್ಟು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮನೆಗೆ ಹಿಂತಿರುಗುವ ವೇಳೆ ಜೋರಾಗಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ...







