ಮೈಸೂರು ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು ; ಇಬ್ಬರಿಗೆ ಗಾಯ – ಕಹಳೆ ನ್ಯೂಸ್
ಮೈಸೂರು: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಘಟನೆ ನಡೆದಿದೆ. ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ...







