Saturday, March 7, 2026

ಶಿವಮೊಗ್ಗ

ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಕಾರು-ಬಸ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು-ಕಹಳೆ ನ್ಯೂಸ್

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತ ದುರ್ದೈವಿಗಳು. ಶಿವಮೊಗ್ಗ ಕಡೆಯಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ ಯಾರಿಗೂ ಹೇಳದೆ ಮನೆಗೆ...
ಜಿಲ್ಲೆಶಿವಮೊಗ್ಗಸುದ್ದಿ

ಜೀಪ್ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ-ಕಹಳೆ ನ್ಯೂಸ್

ಶಿವಮೊಗ್ಗ: ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಮಂದಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊAಡಿವೆ. ಪರಿಣಾಮ ಜೀಪ್‌ನಲ್ಲಿದ್ದ 8 ಜನಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಡಿಯಲ್ಲಿದ್ದ ಕೆಲವರು ಕೇರಳದಿಂದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಶಿವಮೊಗ್ಗಸುದ್ದಿ

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ದಾಳಿ, 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ...
ರಾಜಕೀಯಶಿವಮೊಗ್ಗಸುದ್ದಿ

ಶಿವಮೊಗ್ಗದಲ್ಲಿ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯ : ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ರವರಿಗೆ 62 ಸಾವಿರ ಮತಗಳ ಭಾರಿ ಹಿನ್ನಡೆ ! –ಕಹಳೆ ನ್ಯೂಸ್

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ರವರಿಗೆ ಭಾರಿ ಹಿನ್ನಡೆಯಾಗಿದೆ. 52516 ಮತಗಳಿಂದ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈವರೆಗೆ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬಿಜೆಪಿ : ಬಿ.ವೈ.ರಾಘವೇಂದ್ರ –...
ರಾಜಕೀಯಶಿವಮೊಗ್ಗಸುದ್ದಿ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಭಾಗಿ-ಕಹಳೆ ನ್ಯೂಸ್

ಸಿದ್ದಾಪುರ : ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಬಿ.ವೈ ರಾಘವೇಂದ್ರ ರವರ ಪರ ಮತಯಾಚನೆ ನಡೆಸಿದ ಅವರು, ಇಲ್ಲಿ ನೆರೆದಿರುವ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಬಾರಿಯೂ ಬಿಜೆಪಿ ಇಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿ ಪ್ರಚಂಡ ವಿಜಯಕ್ಕೆ ಮುನ್ನುಡಿ ಬರೆಯುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರುರಾಜ್...
ರಾಜಕೀಯಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ. ವೈ. ರಾಘವೇಂದ್ರ – ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಉಡುಪಿ ನಿಕಟಪೂರ್ವ ಶಾಸಕರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು. ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಿಂದ - ಗೋಪಿ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ಬಳಿಕ ಜಿಲ್ಲಾಧಿಕಾರಿ...
ರಾಜಕೀಯಶಿವಮೊಗ್ಗಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನಲೆ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಅತೀ ಹೆಚ್ಚು ಮತಗಳಿಂದ ವಿಜಯಗೊಳಿಸಲು ನರೇಂದ್ರ ಮೋದಿ ಕರೆ – ಕಹಳೆ ನ್ಯೂಸ್

ಶಿವಮೊಗ್ಗ: ಈಗಾಗಲೇ ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚುತ್ತಿದ್ದು ಮತದಾನದ ದಿನಾಂಕ ಕೂಡ ಘೋಷಣೆಯಾಗಿದೆ, ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭರ್ಜರಿ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ನಿನ್ನೆ ಶಿವಮೊಗ್ಗದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡದ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಭಾರಿ ಮತಗಳಿಂದ ವಿಜಯಗೊಳಿಸಬೇಕು ಎಂದು ಕರೆ ನೀಡಿದ್ದಾರೆ....
1 2 3 4 5
Page 4 of 5