Recent Posts

Monday, June 8, 2026

ಹಾಸನ

ಜಿಲ್ಲೆಸುದ್ದಿಹಾಸನ

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ ಯತ್ನ : ಕೊಲೆ ಬೆದರಿಕೆಗೆ ಹೆದರಿ ಬೈಕ್‌ನಿಂದ ಜಿಗಿದ ಬಾಲಕಿ -ಕಹಳೆ ನ್ಯೂಸ್

ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ  ನಡೆದಿದೆ. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್‌ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಾಪಸ್‌ ಕರೆದುಕೊಂಡು ಬರುವಾಗ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿದ್ಯಾಭ್ಯಾಸದ ಜೊತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ....
ಜಿಲ್ಲೆಸುದ್ದಿಹಾಸನ

ಯುವತಿ ವಿಚಾರವಾಗಿ ಕಿರುಕುಳ ಆರೋಪ :  ಆಡಿಯೋ ರೆಕಾರ್ಡ್ ಮಾಡಿಟ್ಟು ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್  ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ...
ಜಿಲ್ಲೆಸುದ್ದಿಹಾಸನ

ಇಂದು ಲೋಕಾರ್ಪಣೆಗೊಳ್ಳಲಿದೆ ಅಂಬಾರಿ ಆನೆ ಅರ್ಜುನನ ಪ್ರತಿಮೆ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಸಕಲೇಶಪುರ  ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್‌ಮಂಜು ಭಾಗಿಯಾಗಲಿದ್ದಾರೆ. 2023ರ ಡಿಸೆಂಬರ್...
ಜಿಲ್ಲೆಸುದ್ದಿಹಾಸನ

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್...
ಜಿಲ್ಲೆಸುದ್ದಿಹಾಸನ

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ :ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು -ಕಹಳೆ ನ್ಯೂಸ್

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ   ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ  ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ   ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ...
ಜಿಲ್ಲೆಸುದ್ದಿಹಾಸನ

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ : ಹಲವರಿಗೆ ಗಾಯ -ಕಹಳೆ ನ್ಯೂಸ್

ಹಾಸನ: ಇಲ್ಲಿನ  ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌ ವಿಚಾರಕ್ಕೆ ಸಿನಿಯರ್‌ ಹಾಗೂ ಜ್ಯೂನಿಯರ್‌ ವಿದ್ಯಾರ್ಥಿಗಳ  ನಡುವೆ ಮಾರಾಮಾರಿ ನಡೆದಿದೆ. ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕಾಲೀಜಿನ ಡೀನ್‌ ನಟರಾಜ್‌ ಅವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರು ಆಧರಿಸಿ ತನಿಖೆಗೆ...
ಜಿಲ್ಲೆಸುದ್ದಿಹಾಸನ

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ : ಗಾರ್ಡ್‌ ಸ್ಥಿತಿ ಗಂಭೀರ  -ಕಹಳೆ ನ್ಯೂಸ್

ಹಾಸನ: ಮೂವರು ಇಟಿಎಫ್  ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ ಅವರು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಕಾಡಾನೆಗಳ ಹೆಜ್ಜೆ ಗುರುತು ನೋಡಿಕೊಂಡು, ಚಲನವಲನ ಗಮನಿಸುತ್ತ ರಮೇಶ್, ವಿಶ್ವ ಹಾಗೂ ಜೀವನ್ ತೆರಳುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ....
ಜಿಲ್ಲೆಸುದ್ದಿಹಾಸನ

ಮೂರು ದಿನಗಳ ಆಪರೇಷನ್‌ ಯಶಸ್ವಿ : ನರಹಂತಕ ಕಾಡಾನೆ ಸೆರೆ -ಕಹಳೆ ನ್ಯೂಸ್

ಹಾಸನ: ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆ ಕ್ಯಾಪ್ಟನ್ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು. ಚುಚ್ಚುಮದ್ದು ನೀಡುತ್ತಿದ್ದಂತೆ ನರಹಂತಕ ಒಂಟಿಕೋರೆ ಕಾಡಾನೆ ಹಾಗೂ...
1 2 3 14
Page 1 of 14