50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ : ಚಾಲಕ, ಕ್ಲೀನರ್ ಪವಾಡಸದೃಶ ಪಾರು – ಕಹಳೆ ನ್ಯೂಸ್
ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟೀ ಎಸ್ಟೇಟಿನ ಲೈನ್ ಮನೆಗಳ ಬಳಿ ಪ್ರಪಾತಕ್ಕೆ ಉರುಳಿದೆ. ಅಪಘಾತದಲ್ಲಿ ಲಾರಿ ಚಾಲಕ ಪಾರಾಗಿದ್ದು, ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು...







