ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ: ಪರ್ಯಾಯ ಮಾರ್ಗದಲ್ಲಿ ತೆರಳಲು ಸೂಚನೆ…! -ಕಹಳೆ ನ್ಯೂಸ್
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸುತ್ತಿದ್ದು, ಶೃಗೇರಿ ಬಳಿ ನೆಮ್ಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ. ಭಾರಿ ಮಳೆಯಿಂದಾಗಿ ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಶೃಂಗೇರಿ-ಮಂಗಳೂರು ರಸ್ತೆ ಮಾರ್ಗ ಬಂದ್ ಆಗಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು, ಮರಗಳನ್ನು ತೆರವುಗೊಳಿಸಲು ಮಳೆ ಅಡ್ಡಿಯಾಗಿದೆ. ಈ ಭಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ತೆರಳುವಂತೆ ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ....







