ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೂವರು ಬೈಕ್ ಸವಾರರು ಸಾ*ವು
ತುಮಕೂರು(ಜೂ.6) ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಅವಾಂತರ, ಅವಘಡಗಳು ಸಂಭವಿಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆ ಹೆಚ್ಚಾಗಿದ್ದ ಕಾರಣ ಬೈಕ್ ಸವಾರರು...







