ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ – ಕಹಳೆ ನ್ಯೂಸ್
ಬೆಳಗಾವಿ - ವಾಣಿಜ್ಯ , ಕೈಗಾರಿಕೆ, ಟ್ರಸ್ಟ್, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನಗೊಳಿಸುವ ನಿಯಮವನ್ನು 15 ದಿನಗಳಿಂದ 1 ತಿಂಗಳೊಳಗೆ ರಾಜ್ಯಾದ್ಯಂತ ಕಡ್ಡಾಯ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡ ಕಡ್ಡಾಯ ನಾಮಫಲಕ ಅನುಷ್ಠಾನ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ...







