ಕಾರು ಅಪಘಾತದಲ್ಲಿ ಯುವತಿ ಸಾವು – ಕಹಳೆ ನ್ಯೂಸ್
ಮಂಡ್ಯ: ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದ ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಮೃತ ಯುವತಿ. ಆ.2ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ದಿನ ಮನೆಗೆ ಹೋಗುವುದಾಗಿ ಪಿಜಿ ಮಾಲೀಕರಿಗೆ ತಿಳಿಸಿದ್ದ ನವೀನಾ, ತನ್ನ ಸ್ನೇಹಿತರಾದ ಅಶ್ವಿನಿ, ವಿಷ್ಣು...






