Friday, March 6, 2026

ಮೈಸೂರು

ಜಿಲ್ಲೆದೆಹಲಿಮೈಸೂರುರಾಜ್ಯಸುದ್ದಿ

ಪ್ರಧಾನಿ ಮೋದಿ ಜೊತೆಗಿನ ಅದ್ಭುತ ಸಂಬಂಧವನ್ನು ಶ್ಲಾಘಿಸಿದ ಟ್ರಂಪ್, ಭಾರತವನ್ನು ಅಮೇರಿಕಾದ ಪ್ರಮುಖ ಪಾಲುದಾರ ಎಂದ US ಅಧ್ಯಕ್ಷ – ಕಹಳೆ ನ್ಯೂಸ್

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ "ಮುಖ್ಯ" ಆರ್ಥಿಕ ಮತ್ತು ಕಾರ್ಯತಂತ್ರದ ಪಾಲುದಾರನಾಗಿ ಭಾರತದ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ "ಅದ್ಭುತ ಸಂಬಂಧ" ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದ್ಭುತ ಸಂಬಂಧವನ್ನು ಹೊಂದಿದ್ದೇವೆ ಮತ್ತು ಸೆರ್ಗಿಯೋ (ಗೋರ್) ಅವರು ಈಗಾಗಲೇ ಪ್ರಧಾನಿಯೊಂದಿಗೆ ಸ್ನೇಹ ಬೆಳೆಸಿಕೊಂಡಿರುವುದರಿಂದ ಅದನ್ನು ಹೆಚ್ಚಿಸಿದ್ದಾರೆ" ಎಂದು ಟ್ರಂಪ್ ಸೋಮವಾರ ಓವಲ್ ಕಚೇರಿಯಲ್ಲಿ...
ಜಿಲ್ಲೆಮೈಸೂರುಸುದ್ದಿ

ಅರಸೀಕೆರೆಯಲ್ಲಿ ರೈಲ್ವೆ ಕಾಮಗಾರಿ ಹಿನ್ನಲೆ: ಹುಬ್ಬಳ್ಳಿ ಎಕ್ಸ್ ಪ್ರೆಸ್ ಸೇರಿ 3 ರೈಲುಗಳ ಸಂಚಾರ ರದ್ದು – ಕಹಳೆ ನ್ಯೂಸ್

ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್‌ನಲ್ಲಿ ನಡೆಯಲಿರುವ ಪ್ಲಾಟ್‌ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ - ಅರಸೀಕೆರೆ ಎಕ್ಸ್‌ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ....
ಜಿಲ್ಲೆಮೈಸೂರುಶಿಕ್ಷಣಸುದ್ದಿ

 ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ – ಕಹಳೆ ನ್ಯೂಸ್

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು...
ಜಿಲ್ಲೆಮೈಸೂರುರಾಜ್ಯಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ – ಕಹಳೆ ನ್ಯೂಸ್

ಮೈಸೂರು: 'ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ' ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. 'ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ...
ಮೈಸೂರುರಾಜ್ಯಸುದ್ದಿ

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ- ಕಹಳೆ ನ್ಯೂಸ್

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್  ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ ವಿನೋಬಾ...
ದಕ್ಷಿಣ ಕನ್ನಡಮೈಸೂರುಸುದ್ದಿ

ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ-ಕಹಳೆ ನ್ಯೂಸ್

ಮೈಸೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ....
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

 ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...
ಮೈಸೂರುಸುದ್ದಿ

ನಾಲೆಗೆ ಬಿದ್ದ ಬಾಲಕನ ರಕ್ಷಿಸಲು ಹೋಗಿ ಸಹೋದರರು ನೀರು ಪಾಲು- ಕಹಳೆ ನ್ಯೂಸ್

ಮೈಸೂರು: ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ನಂದನ್(25), ರಾಕೇಶ್(20) ಮೃತ ಸಹೋದರರು. ಬಗಡಗಲಹುಂಡಿ ಗ್ರಾಮದ ರಮೇಶ್ ಪುತ್ರರಾದ ನಂದನ್ ಮತ್ತು ರಾಕೇಶ್ ಅವರು ವರುಣ ನಾಲೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆಗೆ ಹೋದಾಗ ಘಟನೆ ನಡೆದಿದೆ. ನಾಲೆಯಲ್ಲಿ ಕೊಂಬೆ ಹಿಡಿದುಕೊಂಡಿದ್ದ ಬಾಲಕನ ರಕ್ಷಣೆಗೆ ಇಬ್ಬರು ಧಾವಿಸಿದ್ದಾರೆ. ಬಾಲಕನ ರಕ್ಷಣೆಗಾಗಿ ಇಬ್ಬರೂ ಸಹೋದರರು ನಾಲೆಗೆ ಇಳಿದಿದ್ದಾರೆ. ಈ ವೇಳೆ ನಾಲೆಯಲ್ಲಿ...
1 2 3 4 5 18
Page 3 of 18