ಸಚಿವ ಮಧು ಬಂಗಾರಪ್ಪ ಜನ್ಮದಿನ : ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ -ಕಹಳೆ ನ್ಯೂಸ್
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ. ಹೌದು, ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ...







