Saturday, July 25, 2026

ಶಿವಮೊಗ್ಗ

ಜಿಲ್ಲೆಶಿವಮೊಗ್ಗಸುದ್ದಿ

ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ʻಲೋಕಾʼ ಬಲೆಗೆ – ಕಹಳೆ ನ್ಯೂಸ್

ಶಿವಮೊಗ್ಗ: ಭದ್ರಾವತಿಯಲ್ಲಿ  ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಾಲ್. ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು ನಾಮದೇವ 20 ಸಾವಿರ ರೂ. ಲಂಚ ಕೇಳಿದ್ದ. ಶಾಲೆಗೆ ಡ್ರಮ್‌ ಸೆಟ್ ಬೇಕು ಎಂಬ ನೆಪದಲ್ಲಿ ಲಂಚ ಕೇಳಿದ್ದ. ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು...
ಜಿಲ್ಲೆಶಿವಮೊಗ್ಗಸುದ್ದಿ

ಪಾರಂಪರಿಕ ಭತ್ತದ ತಳಿಗಳ ಸಂರಕ್ಷಣೆಗೆ ಕೊಳವಂಕ ಗ್ರಾಮದಲ್ಲಿ ಪಾದಯಾತ್ರೆ – ಕಹಳೆ ನ್ಯೂಸ್

ಶಿವಮೊಗ್ಗ  : ಸಾವಯವ ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಪಾರಂಪರಿಕ ಭತ್ತದ ತಳಿಗಳ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ, ಶ್ರೀ ಸೋದೆ ವಾದಿರಾಜ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹೊಸನಗರ ತಾಲೂಕಿನ ಕೊಳವಂಕ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದರು.      ಹಾದಿಗಲ್ಲು ಅಭಯ ಲಕ್ಷ್ಮೀ ನರಸಿಂಹ ದೇವಸ್ಥಾನ ಹಾಗು ತೀರ್ಥಹಳ್ಳಿಯ ಕೃಷಿ ಪ್ರಯೋಗ ಪರಿವಾರದ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ...
ಜಿಲ್ಲೆಶಿವಮೊಗ್ಗಸುದ್ದಿ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು – ಕಹಳೆ ನ್ಯೂಸ್

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ್ ಫಾಲ್ಸ್‌ನಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸಲು ಉದ್ದೇಶಿಸಲಾಗಿರುವ ಬಹುನಿರೀಕ್ಷಿತ 'ರೋಪ್ ವೇ - ಕೇಬಲ್ ಕಾರ್' ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಗರ ತಹಶೀಲ್ದಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಹಾಗೂ ಸರ್ವೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ. ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದಾಗಿರುವ ಹಾಗೂ ಸಾಗರ ತಾಲೂಕಿನ ಪ್ರಮುಖ ಆಕರ್ಷಣೆಯಾಗಿರುವ ಜೋಗ್ ಫಾಲ್ಸ್ ಅನ್ನು ಅಂತರರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಹಲವು ಯೋಜನೆಗಳು ಪ್ರಗತಿಯಲ್ಲಿವೆ....
ಜಿಲ್ಲೆಶಿವಮೊಗ್ಗಸುದ್ದಿ

ತೀರ್ಥಹಳ್ಳಿ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌ -ಕಹಳೆ ನ್ಯೂಸ್

ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್  ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ...
ಜಿಲ್ಲೆಶಿವಮೊಗ್ಗಸುದ್ದಿ

ರೆಕ್ಟಲ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್‌ -ಕಹಳೆ ನ್ಯೂಸ್

ಶಿವಮೊಗ್ಗ: ರೆಕ್ಟಲ್‌ ಕ್ಯಾನ್ಸರ್‌ನಿಂದ  ಬಳಲುತ್ತಿದ್ದ ಅಭಿಮಾನಿಯ ಆರೋಗ್ಯವನ್ನು ಕೆಜಿಎಫ್‌ ಸ್ಟಾರ್‌ ಯಶ್‌ ವಿಚಾರಿಸಿದ್ದಾರೆ. ಶಿವಮೊಗ್ಗ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೀಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ, ಅಭಿಮಾನಿಗೆ ಯಶ್‌ ಧೈರ್ಯ ತುಂಬಿದ್ದಾರೆ....
ಜಿಲ್ಲೆರಾಜ್ಯಶಿವಮೊಗ್ಗಸುದ್ದಿ

ಶಿವಮೊಗ್ಗದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಸ್ಥಗಿತ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯ ಲಿಂಗನಮಕ್ಕಿ ಜಲಾಶಯದ  ಶರಾವತಿ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದ ಹಿನ್ನೆಲೆ ಹಲ್ಕೆ-ಮುಪ್ಪಾನೆ  ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಕರೂರು ಮತ್ತು ಭಾರಂಗಿ ಹೋಬಳಿಯ ಸಂಪರ್ಕದ ಅತಿ ಮುಖ್ಯ ಮಾರ್ಗ ಇದಾಗಿದ್ದು, ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಜೂ.2ರಿಂದ ಸ್ಥಗಿತಗೊಳಿಸುತ್ತಿರುವುದಾಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ತಿಳಿಸಿದೆ. ಲಿಂಗನಮಕ್ಕಿ ಡ್ಯಾಂನಲ್ಲಿ ಶರಾವತಿ ಹಿನ್ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು, ನೀರಿನ ಆಳದಲ್ಲಿರುವ...
ಕೊಡಗುಜಿಲ್ಲೆಶಿವಮೊಗ್ಗಸುದ್ದಿ

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್-ಕಹಳೆ ನ್ಯೂಸ್

ಶಿವಮೊಗ್ಗ: ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು...
ಶಿವಮೊಗ್ಗಸುದ್ದಿ

ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ-ಕಹಳೆ ನ್ಯೂಸ್

ಶಿವಮೊಗ್ಗ: ನಗರದ  ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ  ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಹಠಾತ್‌ ಆಗಿ ಮೊದಲ ಮಹಡಿಯಲ್ಲಿ ನಿಂತಿತ್ತು. ಅದರಲ್ಲಿ ಭರತ್ (37), ಅನುಷಾ (35), ಅನೀಸ್ ಫಾತಿಮಾ (44), ಮುಸರತ್ (39), ಸೂಬಿಯಾ (31), ಮಿಜ್ಜಾ (09), ಬಿಲಾಲ್ (06), ಪ್ರಶಾಂತ್ (28) ಹಾಗೂ ಪ್ರವೀಣ್ ಕುಮಾರ್ (47) ಎಂಬವರು...
1 2 3 6
Page 1 of 6