Friday, March 6, 2026

ಶಿವಮೊಗ್ಗ

ಜಿಲ್ಲೆಶಿವಮೊಗ್ಗಸುದ್ದಿ

ರಾಜ್ಯದಲ್ಲಿ ಇದುವರೆಗು ಶೇ.56ರಷ್ಟು ‘ಜಾತಿ ಗಣತಿ’ ಸಮೀಕ್ಷೆ ಪೂರ್ಣಗೊಂಡಿದೆ : ಮಧು ಬಂಗಾರಪ್ಪ – ಕಹಳೆ ನ್ಯೂಸ್

ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ 56 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಾತಿ ಜಾತಿ ನಡುವೆ ಬೆಂಕಿ ಹಚ್ಚುತ್ತಿದ್ದಾರೆ ಎನ್ನುವ ಆರೋಪದ ವಿಚಾರವಾಗಿ ಬಿಜೆಪಿ...
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

“ವಿಶ್ವ ನಾಯಕನ ಜನ್ಮ ದಿನ – ದೇಶವೇ ಹೆಮ್ಮೆ ಪಡುವ ಸಂಭ್ರಮದ ದಿನ” – ಕಹಳೆ ನ್ಯೂಸ್

ಶಿವಮೊಗ್ಗ : ವಿಶ್ವ ನಾಯಕ ನಮ್ಮ ಹೆಮ್ಮೆಯ ಪ್ರಧಾನಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರ 75ನೇ ವರ್ಷದ ಜನ್ಮ ದಿನಾಚರಣೆಯ ನಿಮಿತ್ತ ಬಿಜೆಪಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆಯಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಳ್ಳಲಾಯಿತು. ಸ್ವಾತಂತ್ರ್ಯ ಭಾರತ ಕಂಡ ಅಪ್ರತಿಮ ದಿಗ್ಗಜ ನಾಯಕ, ಭಾರತೀಯ ಜನತಾ ಪಕ್ಷದ ಕೋಟ್ಯಾಂತರ ಕಾರ್ಯಕರ್ತರ ಹೆಮ್ಮೆಯ ಸ್ಪೂರ್ತಿಯ ಚಿಲುಮೆ, ಭಾರತ...
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

ಹಾವುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿ ಹಿಂಸಾತ್ಮಕವಾಗಿ ವರ್ತನೆ-ದೂರು ದಾಖಲು -ಕಹಳೆ ನ್ಯೂಸ್

ಶಿವಮೊಗ್ಗ: ಉಂಬ್ಳೆಬೈಲು ವಲಯ ಅರಣ್ಯ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ಹೆಬ್ಬಾವು ಹಾಗೂ ನಾಗರಹಾವಿನ ಜತೆ ಹಿಂಸಾತ್ಮಕವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಮೇಲೆ ಆರೋಪಿ ಮನೆ ಮೇಲೆ ದಾಳಿ ಮಾಡಿ ಹಾವುಗಳನ್ನು ರಕ್ಷಿಸಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿದ್ದಾರೆ. ಮಳಲಿಕೊಪ್ಪ ಬಳಿ ಹಾವುಗಳನ್ನು ಹಿಡಿದು ಅದರ ಬಾಯಿಗೆ ಪ್ಲಾಸ್ಟರ್ ಸುತ್ತುವುದು ಕಂಡು ಬಂದಿತ್ತು. ಹೆಬ್ಬಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಶೆಡ್ಯೂಲ್ 1 ಗೆ ಸೇರಿದ ಉರಗವಾಗಿದೆ. ವಿಡಿಯೋ...
ಅಂಕಣಶಿವಮೊಗ್ಗಸುದ್ದಿ

ಹಾಸನ ದುರಂತ | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ ; ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ-ಕಹಳೆ ನ್ಯೂಸ್

ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ  ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ  ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ....
ಕ್ರೈಮ್ಶಿವಮೊಗ್ಗಸುದ್ದಿ

ಸಾಗರ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ; ಯುವಕನಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌  ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ  ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಈ ಅವಘಡ ಸಂಭವಿಸಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ಚಿಕಿತ್ಸೆ...
ಜಿಲ್ಲೆಶಿವಮೊಗ್ಗಸುದ್ದಿ

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ -ಕಹಳೆ ನ್ಯೂಸ್

ಶಿವಮೊಗ್ಗ: ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ಬೈಕ್‌ಗಳ ನಡುವೆ ಗುರುವಾರದಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಾಗರದ ಉಳ್ಳೂರಿನ ಅಗ್ನಿವೀರ ಯೋಧ ಪ್ರಜ್ವಲ್ 21 ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಸಿದರು. ತಂದೆ ರಾಮಚಂದ್ರ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಗಳೆಮನೆ ಗ್ರಾಮದವರು. ಪ್ರಸ್ತುತ ಚಾಮರಾಜನಗರದ ಸೇವಾಭಾರತಿ ಶಾಲೆ ಶಿಕ್ಷಕ ರಾಮಚಂದ್ರ ಅವರ ಪುತ್ರ...
ಜಿಲ್ಲೆಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿ -ಕಹಳೆ ನ್ಯೂಸ್

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. 1. ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ ಬೆಳೆಗಾರ ರೈತ...
ಜಿಲ್ಲೆಶಿವಮೊಗ್ಗಸುದ್ದಿ

ಶಿವಮೊಗ್ಗದಲ್ಲಿ ಗಣೇಶ ಮೂರ್ತಿಗೆ ಕಾಲಿನಿಂದ ಒದ್ದು, ನಾಗನ ವಿಗ್ರಹ ಚರಂಡಿಗೆಸೆದು ವಿಕೃತಿ ಮೆರೆದ ಕಿಡಿಗೇಡಿಗಳು- ಕಹಳೆ ನ್ಯೂಸ್

ಶಿವಮೊಗ್ಗ - ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು, ನಾಗರಕಲ್ಲನ್ನು ಜಖಂ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ವುಲ್ಲಾ ಹಾಗೂ ಸದ್ದಾಂ ಬಂಧಿಸಿ ಕಿಡಿಗೇಡಿಗಳಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ...
1 2 3 4 5
Page 2 of 5