ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆ – ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ – ಕಹಳೆ ನ್ಯೂಸ್
ಹಾವೇರಿ: ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ನದಿ ತೀರದ ಗ್ರಾಮಗಳ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ರೈತರು ವರದಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಈ ಬಾರಿ...







