ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ : ಶಾಸಕ ಕಾಮತ್ -ಕಹಳೆ ನ್ಯೂಸ್
ಮಂಗಳೂರು : ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ...







