Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ -ಕಹಳೆ ನ್ಯೂಸ್

ಮಂಗಳೂರು: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ ಗೆಂದು ಹೋದವರು ಮನೆಗೆ ವಾಪಸ್ ಆಗಿಲ್ಲ. ಇದರಿಂದ ಕಂಗಾಲಾದ ಪತ್ನಿ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ : ಅಪಾಯದ ಮಟ್ಟದತ್ತ ನೇತ್ರಾವತಿ ನದಿ – ಕಹಳೆ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟ 31 ಮೀ ಆಗಿದ್ದು, 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಕುಮಾರಧಾರಾ ನದಿಗಿಂತಲೂ ಅಧಿಕ ಪ್ರಮಾಣದ ನೀರಿನ ಹರಿವು ನೇತ್ರಾವತಿಯಲ್ಲಿದ್ದು, ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಇರುವ 36 ಮೆಟ್ಟಿಲುಗಳ ಪೈಕಿ ರಾತ್ರಿಯ ವೇಳೆಗೆ 27 ಮೆಟ್ಟಿಲುಗಳು ಮುಳುಗಿವೆ. ನದಿಯಲ್ಲಿ ನೀರಿನ ಹರಿಯುವಿಕೆಯ ರಭಸ ಹೆಚ್ಚಿದ್ದು, ಇದರಿಂದ ದೇವಾಲಯದ ಹಿಂಬದಿಯಿಂದ ಹರಿದು ಬಂದು ನೇತ್ರಾವತಿಯೊಂದಿಗೆ ವಿಲೀನಗೊಳ್ಳುವ ಕುಮಾರಧಾರೆಯ ನೀರಿನ ಸರಾಗ ಹರಿಯುವಿಕೆಯನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮ ಪಂಚಾಯತ್‌ನಲ್ಲಿ ರಾಜಕೀಯ ಸಭೆ : ಇಡ್ಕಿದು ಪಿಡಿಒ ಅಮಾನತು – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್‌ ದಾಸ್‌ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಅಮಾನತುಗೊಳಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯವನ್ನು ತೋರಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅವರು ಪಿಡಿಒಗೆ ಕಾರಣ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜನಜಾಗೃತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ -ಕಹಳೆ ನ್ಯೂಸ್

ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ರಾಜ್ಯದ 3,555 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಮುಖೇನ 3 ಲಕ್ಷ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 35 ವರ್ಷಗಳಿಂದ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವೇದಿಕೆ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಜಿಲ್ಲಾ ವೇದಿಕೆಗಳನ್ನು ರಚಿಸಿ ಸುಮಾರು 2,100 ಕ್ಕಿಂತಲೂ ಹೆಚ್ಚು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯೂ ಸಂಚಾರಕ್ಕೆ ಮುಕ್ತ  -ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿ ಬುಧವಾರ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 2ರಂದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿದ್ದು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಫ್ಲೈಓವರ್‌ ನ ಮಧ್ಯ...
ಕಡಬಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ -ಕಹಳೆ ನ್ಯೂಸ್

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ದಿನಾಂಕ. 21.06.2025 ರಂದು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪ.ಪೂ. ವಿದ್ಯಾಲಯಗಳಲ್ಲಿ ಯೋಗ ದಿನಾಚರಣೆ ;ಯೋಗಾಭ್ಯಾಸ ಹಾಗೂ ಆರೋಗ್ಯಕರ ಆಹಾರ ಸೇವನೆ ಅಗತ್ಯ : ಡಾ.ಚೇತನಾ ಗಣೇಶ್-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಎರಡು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಬಪ್ಪಳಿಗೆಯಲ್ಲಿ ಮಾತನಾಡಿದ ಪುತ್ತೂರು ಸಿಟಿ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಸಲಹೆಗಾರರಾದ ಡಾ.ಚೇತನಾ ಗಣೇಶ್ ವಿದ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ಹೆಚ್ಚಿಸಲು ಭಸ್ತ್ರಿಕಾ ಮತ್ತು ಕಪಾಲಭಾತಿ ಪ್ರಾಣಾಯಾಮಗಳ ಅಭ್ಯಾಸ ಮಾಡುವುದು ಅತ್ಯವಶ್ಯಕವಾಗಿದೆ ಎಂದು ನುಡಿದರು. ಪುರುಷರು ಆಸನಗಳಲ್ಲಿ ಶ್ರೇಷ್ಟವಾದ ಶೀರ್ಷಾಸನವನ್ನು ಮತ್ತು ಮಹಿಳೆಯರು ಸವಾರ್ಂಗಾಸನವನ್ನು ನಿಯಮಿತವಾಗಿ ಅಭ್ಯಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ. ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ -ಕಹಳೆ ನ್ಯೂಸ್

ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ...
1 116 117 118 119 120 727
Page 118 of 727