Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿರಕ್ಷಕ ಶಿಕ್ಷಕ ಸಂಘದ ಸಭೆ ;ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್

ಪುತ್ತೂರು: ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋಷಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಜೂ. 5 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಜೆ ಶ್ರೀರಾಮ ಭಜನಾ ಮಂದಿರ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ವನ್ನು ಕಜೆ ಶ್ರೀರಾಮ ಭಜನಾ ಮಂದಿರ ವಠಾರದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ಜೊತೆ ಸೇರಿ ಜೊತೆಗೆ ವಿಶೇಷವಾಗಿ ಜೂನ್ ತಿಂಗಳ ಹುಟ್ಟುಹಬ್ಬ ಆಚರಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಅವನಿ ವಿಜ್ಞಾನ ಸಂಘದ ವತಿಯಿಂದ ಗಿಡಗಳನ್ನು ನೆಡುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರು

ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್ ನಿಧನ -ಕಹಳೆ ನ್ಯೂಸ್

ಮಂಗಳೂರು: ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ (70) ರವಿವಾರ ಜೂ8 ರಂದು ನಿಧನ ಹೊಂದಿದರು. ಕೊರಗದಾಸ ಅವರಲ್ಲಿ ಯಕ್ಷಗಾನ ತರಬೇತಿ ಪಡೆದು ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದ ಕಟ್ಟೆ, ಸುರತ್ಕಲ್ ಮತ್ತು ದೀರ್ಘಕಾಲ ಕಟೀಲು ಮೇಳ ಹೀಗೆ ಒಟ್ಟೂ ಸುಮಾರು ಐದು ದಶಕ ಯಕ್ಷಗಾನ ತಿರುಗಾಟ ಮಾಡಿದ್ದರು. ಮೂಕಾಸುರ, ವಿಜಯ, ದಾರುಕ, ಪಾಪಣ್ಣ, ಬಾಹುಕ ಮೊದಲಾದ ಪೌರಾಣಿಕ ಪಾತ್ರಗಳ ಮೂಲಕ ಕಲಾರಸಿಕರನ್ನು ರಂಜಿಸಿದ್ದರು. ಕನ್ನಡ, ತುಳು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ ಒಪ್ಪಿಸಿರುವುದು ದೇಶವಿರೋಧಿ ಶಕ್ತಿಗಳನ್ನು ಬೇರು ಸಮೇತ ಕಿತ್ತೊಗೆಯಲು ಮೊದಲ ಹೆಜ್ಜೆ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸ್ವಾಗತಿಸಿದ್ದಾರೆ. ಸುಹಾಸ್‌ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಕ್ಯಾ. ಚೌಟ ಅವರು, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್‌ ಮೂಲಭೂತವಾದಿಗಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಯರ್ತಡ್ಕ: ಕುಂಬಾರ ಸೇವಾ ಸಂಘ (ರಿ) ಕಾಯರ್ತಡ್ಕ ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ -ಕಹಳೆ ನ್ಯೂಸ್

ಕಾಯರ್ತಡ್ಕ: ಕುಂಬಾರ ಸೇವಾ ಸಂಘ (ರಿ) ಕಾಯರ್ತಡ್ಕ ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ ಕುಂಬಾರ ಸೇವಾ ಘಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಜರಗಿತು. ಪೂವಪ್ಪ ಕುಂಬಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಕುಂಬಾರ ಸೇವಾ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಸಂಜೀವ ಕುಂಬಾರ ಕಾಯರ್ತಡ್ಕ, ಸೇವಾ ಸಂಘದ ಅಧ್ಯಕ್ಷರಾದ ಶ್ರೀಯುತ ಗಣೇಶ್ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಲಲಿತಾಕ್ಷಿ, ಶಾಲಾ ಶಿಕ್ಷಕಿ ಶ್ರೀಮತಿ ವೇದಾವತಿ. ಕುಂಭಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ವಸತಿನಿಲಯಗಳಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಯೋಗ ಶಿಬಿರ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿನಿಲಯದ ಸಹಯೋಗದೊಂದಿಗೆ ಸಂಸ್ಥೆಯ ತಕ್ಷಶಿಲಾ ಹಾಗೂ ಶಾರದಾ ವಸತಿ ನಿಲಯಗಳಲ್ಲಿ 21 ದಿನಗಳ ಯೋಗ ಶಿಬಿರ ಉದ್ಘಾಟನೆಗೊಂಡಿತು. ತಕ್ಷಶಿಲಾ ವಸತಿನಿಲಯ ಪದವಿಪೂರ್ವ ಕಾಲೇಜಿನ ತಕ್ಷಶಿಲಾ ವಸತಿನಿಲಯದಲ್ಲಿ SPYSS ಜಿಲ್ಲಾ ಸಂಘಟನಾ ಪ್ರಮುಖರಾದ ಹರಿಪ್ರಸಾದ್ ದೀಪ ಬೆಳಗಿಸುವ ಮೂಲಕ ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಸತಿನಿಲಯಗಳ ಆಡಳಿತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೂ. 09ರಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಕರಿಮಣಿ ಮೇಳ ಆರಂಭ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜೂ.09ರಿಂದ ಜಿ.ಎಲ್. ಕರಿಮಣಿ ಮೇಳ ನಡೆಯಲಿದೆ. ನಿಮ್ಮ ಹಳೆಯ ಕರಿಮಣಿಯನ್ನ ಹೊಸತನದೊಂದಿಗೆ ಬದಲಾಯಿಸಿ ಪ್ರತಿ ಗ್ರಾಂ. 150/- ಅಧಿಕ ದರ ಪಡೆಯಿರಿ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪುವಿನ ದ.ಕ.ಜಿ. ಪಂ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪೆನ್ಸಿಲ್, ಸಿಹಿ ತಿಂಡಿ ಕೊಟ್ಟು ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕೇಪು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ  ಜೂ. 02  ರಂದು ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ಪೆನ್ಸಿಲ್ ಕೊಟ್ಟು ಸಿಹಿ ತಿಂಡಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ ರಾಘವೇಂದ್ರ ಸ್ವಾಮಿ,ಶ್ರೀ ಉಳ್ಳಾಳ್ತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ...
1 124 125 126 127 128 727
Page 126 of 727