Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕೇಪು : ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ. 06 ರಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪುವಿನಲ್ಲಿ ಗಿಡಗಳನ್ನು ನೆಡುವುದು ಮತ್ತು ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಪುತ್ತೂರು ವಲಯದ ವಿಟ್ಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶ್ರೀ ವೀರಣ್ಣ, ಗಸ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ ; ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ನಗಾರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೆ ಪತ್ರ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ ಸಂಪರ್ಕಿಸುವ ಮುಖ್ಯರಸ್ತೆಯು ಮರಕಡದವರೆಗೆ ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ದಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ: ಕಾಲು ಜಾರಿ ಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾ*ವು

  ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೂ.09ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವರ್ಣ ಪಾದುಕಾ ಪೂಜೆ ಹಾಗೂ ಶ್ರೀಗುರುಪರಂಪರಾ ಭಿಕ್ಷಾ ಸೇವೆ – ಕಹಳೆ ನ್ಯೂಸ್

ಪುತ್ತೂರು : ಇದೇ ಬರುವ ಜೂನ್ 9ನೇ ತಾರೀಕು ಸೋಮವಾರ, ಬೆಳಗ್ಗೆ 9:30 ರಿಂದ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀರಾಮಚಂದ್ರಾಪುರ ಮಠದ ಗುರುಪರಂಪರೆಯ ಅತ್ಯಪೂರ್ವವಾದ ಸ್ವರ್ಣ ಪಾದುಕಾ ಪೂಜೆ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ವತಿಯಿಂದ ಶ್ರೀಗುರುಪರಂಪರಾ ಭಿಕ್ಷಾ ಸೇವೆ ನಡೆಯಲಿದೆ. ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಶ್ರೀ ಸಂಸ್ಥಾನ ಗೋಕರ್ಣ, ಶ್ರೀರಾಮಚಂದ್ರಾಪುರ ಮಠ ಇವರಿಂದ ಅನುಗ್ರಹಿಸಲ್ಪಟ್ಟು 36 ಯತಿಗಳ ದಿವ್ಯಸಾನ್ನಿಧ್ಯ ಹೊಂದಿದ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಫರಂಗಿಪೇಟೆ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಯುವಕ ಮೃತ್ಯು -ಕಹಳೆ ನ್ಯೂಸ್

ಫರಂಗಿಪೇಟೆ : ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಶುಕ್ರವಾರ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್ ನಲ್ಲಿರುವ ಝಾಹಿದ್ (28) ಮೃತ ಯುವಕ. ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವವಷ್ಟರಲ್ಲಿ ಮಂಗಳೂರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲಾ ಪರ್ಯಾವರಣ ಸಂಯೋಜಕರಾದ ಕಮಲಾಕ್ಷ ಶಂಭೂರು ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ್ ಶ್ರೀಮಾನ್ ಔಷಧೀಯ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ಕಮಲಾಕ್ಷ ಶಂಭೂರು ಇವರು ಮಾತನಾಡಿ  ಪರಿಸರ ದಿನವನ್ನು ಕೇವಲ ಈ ದಿನಕ್ಕೆ ಮೀಸಲಿಡದೆ ಪ್ರತಿದಿನವೂ ಪರಿಸರವನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ ; ಪ್ಲಾಸ್ಟಿಕ್‌ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ-ಕಹಳೆ ನ್ಯೂಸ್

ಪುತ್ತೂರು: ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್‌ನಿಂದ. ಸೌಂದರ್ಯ  ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್‌ನಿಂದ ಕೂಡಿವೆ. ಆದ್ದರಿಂದಲೇ  ಒಂದಲ್ಲ ಒಂದು ರೀತಿಯ ಅರೋಗ್ಯ ಸಮಸ್ಯೆಗಳು ಮನುಷ್ಯನನ್ನು ಭಾದಿಸುತ್ತಲೇ ಇರುತ್ತವೆ ಎಂದು ಪುತ್ತೂರು ಉಪವಲಯ ಅರಣ್ಯ ಅಧಿಕಾರಿ ಉಲ್ಲಾಸ್ ಕೆ. ಇವರು ಮಾತನಾಡಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
1 125 126 127 128 129 727
Page 127 of 727