ಕಾನೂನು ಪಾಲನೆ ಪ್ರತಿಯೊಬ್ಬರ ಹೊಣೆ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ -ಕಹಳೆ ನ್ಯೂಸ್
ಪುತ್ತೂರು: ಕಾನೂನು ಗೌರವಿಸುವುದು ಮತ್ತು ಪಾಲಿಸುವುದು ಪ್ರತಿಯೊಬ್ಬರ ಹೊಣೆ. ಸ್ವಾತಂತ್ರ್ಯದ ಪರಿಪಾಲನೆಯಾಗಬೇಕೇ ಹೊರತು ಅದನ್ನು ಮೀರಿದ ವರ್ತನೆ ಸರಿಯಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಗೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಜವಾಬ್ದಾರಿ ಸಾರ್ವಜನಿಕರಿಗೂ ಇದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದರು. ಬಕ್ರೀದ್ ಹಬ್ಬದ ಅಂಗವಾಗಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು...







